ಕರೊನಾ ಬುಲೆಟಿನ್​: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Corona
Published on

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಪತ್ತೆಯಾಗುವ ಕೋವಿಡ್​-19 ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿದಿದ್ದು, ಸೋಮವಾರ 2,576 ಕೋವಿಡ್​-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿತರಾಗಿರುವವರ ಒಟ್ಟು ಪ್ರಮಾಣ 8,29,640ಕ್ಕೆ ತಲುಪಿದೆ.

ಮತ್ತೊಂದೆಡೆ ಗುಣಮುಖರ ಪೈಕಿ ಸೋಮವಾರವೊಂದೇ ದಿನ 8,334 ಮಂದಿ ವಿವಿಧ ಆಸ್ಪತ್ರೆ ಹಾಗೂ ಕೋವಿಡ್​ ಕೇರ್ ಸೆಂಟರ್​ಗಳಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಇದುವರೆಗೆ ಗುಣವಾದವರ ಸಂಖ್ಯೆ 7,73,595ಕ್ಕೆ ತಲುಪಿದೆ.

ಅದಾಗ್ಯೂ ರಾಜ್ಯದಲ್ಲಿ 44,805 ಪ್ರಕರಣಗಳು ಸಕ್ರಿಯವಾಗಿದ್ದು, ಅವರಲ್ಲಿ 931 ಮಂದಿ ಗಂಭೀರ ರೋಗಲಕ್ಷಣಗಳಿಂದಾಗಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಒಂದೇ ದಿನದಲ್ಲಿ 29 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ಕರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,221ಕ್ಕೆ ಏರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net