ಕರೊನಾ ಬುಲೆಟಿನ್​: ಇನ್ನೊಂದೇ ದಿನದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 6 ಲಕ್ಷ?

carona logo
Published on

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಹೊಸದಾಗಿ 10,453 ಕರೊನಾ ಸೋಂಕಿತರು ಪತ್ತೆಯಾಗಿದ್ದು, ಇನ್ನೊಂದೇ ದಿನದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 6 ಲಕ್ಷ ದಾಟುವ ಸಾಧ್ಯತೆ ಇದೆ. ಮಂಗಳವಾರ ಸೋಂಕಿತರ ಒಟ್ಟು ಪ್ರಮಾಣ 5,92,911 ತಲುಪಿದೆ.

ರಾಜ್ಯದಲ್ಲಿ ಒಂದೇ ದಿನ 6,628 ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಗುಣವಾದವರ ಒಟ್ಟು ಸಂಖ್ಯೆ 4,76,378ಗೆ ಏರಿದೆ. ಆದರೆ ಒಂದೇ ದಿನ 136 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ಕರೊನಾದಿಂದಾಗಿ 8,777 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ರಾಜ್ಯದಲ್ಲಿ ಸದ್ಯ 1,07,737 ಪ್ರಕರಣಗಳು ಸಕ್ರಿಯವಾಗಿದ್ದು, ಮಂಗಳವಾರ 87,475 ಮಂದಿಯನ್ನು ಕರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net