

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಹೊಸದಾಗಿ 10,070 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಪ್ರಮಾಣ 6,11,837ಕ್ಕೆ ಏರಿದೆ.
ಮತ್ತೊಂದೆಡೆ ಒಂದೇ ದಿನ 7,144 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇದುವರೆಗೆ 4,92,412 ಮಂದಿ ಗುಣವಾಗಿದ್ದಾರೆ. ಆದರೆ ಗುರುವಾರ 130 ಜನ ಸೋಂಕಿಗೆ ಬಲಿಯಾಗಿದ್ದು, ಇದುವರೆಗೆ ಒಟ್ಟು 8,994 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,10,412 ಇದ್ದು, ಅವರೆಲ್ಲ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಮತ್ತು ಕೆಲವರು ಹೋಮ್ ಐಸೋಲೇಷನ್ನಲ್ಲಿ ಇದ್ದಾರೆ. ಬೇಸರದ ಸಂಗತಿ ಎಂದರೆ 811 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.