

ಬೆಂಗಳೂರು: ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ 93 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 2182ಕ್ಕೆ ಏರಿದೆ.
ಈ ಪೈಕಿ 705 ಮಂದಿ ಬಿಡುಗಡೆ ಹೊಂದಿದ್ದು, 1431 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ 43 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ ರಾಜ್ಯದಲ್ಲಿ 43ಕ್ಕೆ ಏರಿದೆ. ಬೇರೆ ಬೇರೆ ರಾಜ್ಯಗಳಿಂದ ಬಂದಿರುವ 73 ಮಂದಿಯಲ್ಲಿ ಹಾಗೂ ಹೊರದೇಶಗಳಿಂದ ಬಂದಿರುವ ಮೂವರಲ್ಲಿ ಸೋಂಕು ಪತ್ತೆಯಾಗಿದೆ.
ಗ್ರೀನ್ ಝೋನ್ ಎಂದು ಘೋಷಿಸಿದ್ದ ರಾಮನಗರದಲ್ಲಿಯೂ ಒಂದು ಸೋಂಕು ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಸದ್ಯ ಚಾಮರಾಜನಗರ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕರೊನಾ ಸೋಂಕಿಗೆ ಗುರಿಯಾಗಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ 10 ಜಿಲ್ಲೆಗಳಲ್ಲಿ ಒಂದೂ ಸೋಂಕು ಪ್ರಕರಣ ಪತ್ತೆಯಾಗಿಲ್ಲ.
ಉಳಿದಂತೆ ಬೆಂಗಳೂರು ನಗರ-8, ಮಂಡ್ಯ-2, ಕಲಬುರಗಿ-16, ಬೆಳಗಾವಿ-1, ಯಾದಗಿರಿ-15, ಉಡುಪಿ-32, ಹಾಸನ-1, ವಿಜಯಪುರ-1 ಉತ್ತರ ಕನ್ನಡ-1, ದಕ್ಷಿಣ ಕನ್ನಡ-4, ಧಾರವಾಡ-4, ಬಳ್ಳಾರಿ-3, ತುಮಕೂರು-1, ಕೋಲಾರ-2, ರಾಮನಗರ-1 ಪ್ರಕರಣಗಳು ಪತ್ತೆಯಾಗಿವೆ.
ಇದನ್ನೂ ಓದಿ: ದಿಲ್ಲಿಯಿಂದ ಬೆಂಗಳೂರಿಗೆ ಒಬ್ಬನೇ ಬಂದ ಐದರ ಪೋರ!
ನಿಜಾಮುದ್ದೀನ್ ಮರ್ಕಜ್ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಉಚಿತ ಆರೋಗ್ಯ ಸಹಾಯವಾಣಿ 080-29711171 ಸಂಪರ್ಕಿಸುವಂತೆ ಸರ್ಕಾರ ಸೂಚಿಸಿದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್ ಅಪ್ಲಿಕೇಷ್ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಸಂಪೂರ್ಣ ವಿವರ ಹೀಗಿದೆ: