ಮತ್ತೆ ಏರಿದ ಸೋಂಕು: ರಾಜ್ಯದಲ್ಲಿ ಇಂದು 3,200ಕ್ಕಿಂತ ಅಧಿಕ ಪ್ರಕರಣ ದೃಢ

corona
Published on

ಬೆಂಗಳೂರು: ರಾಜ್ಯದಲ್ಲಿ ಕಡಿಮೆಯಾಗಿದ್ದ ಕರೊನಾ ಸೋಂಕಿನ ಸಂಖ್ಯೆ ಗುರುವಾರ ಸ್ವಲ್ಪ ಏರಿಕೆ ಕಂಡಿದೆ. 24 ಗಂಟೆಗಳಲ್ಲಿ 3,203 ಪ್ರಕರಣ ಪತ್ತೆಯಾಗಿದ್ದು, 94 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಇಂದು ಪತ್ತೆಯಾದ ಪ್ರಕರಣಗಳನ್ನು ಸೇರಿಸಿ ಒಟ್ಟಾರೆ ಪ್ರಕರಣಗಳ ಸಂಖ್ಯೆ 28,47,013ಕ್ಕೆ ಏರಿಕೆಯಾಗಿದೆ. ಮೃತರ ಸಂಖ್ಯೆ 35,135ಕ್ಕೆ ಹೆಚ್ಚಳವಾಗಿದೆ. ಇಂದು ಬೆಂಗಳೂರು ನಗರವೊಂದರಲ್ಲಿ 676 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ನಗರದಲ್ಲಿನ ಸೋಂಕಿತರ ಸಂಖ್ಯೆ 12,14,235ಕ್ಕೆ ಹೆಚ್ಚಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 18 ಮಂದಿ ಸೋಂಕಿನಿಂದಾಗಿ ಕೊನೆಯುಸಿರೆಳೆದಿದ್ದಾರೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಗುರುವಾರದಂದು 14,302 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟಾರೆಯಾಗಿ ಚೇತರಿಸಿಕೊಂಡವರ ಸಂಖ್ಯೆ 27,46,544ಕ್ಕೆ ಏರಿದೆ. ಸದ್ಯ 65,312 ಸಕ್ರಿಯ ಪ್ರಕರಣಗಳು ಬಾಕಿಯಿವೆ. ಸದ್ಯ ರಾಜ್ಯದಲ್ಲಿ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ. 2.05ರಷ್ಟಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net