ಕರ್ನಾಟಕದಲ್ಲಿ ಇಂದು 2,743 ಮಂದಿಗೆ ಕರೊನಾ ದೃಢ; 75 ಸೋಂಕಿತರ ಸಾವು

corona
Published on

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರದಂದು 2,743 ಮಂದಿಯಲ್ಲಿ ಕರೊನಾ ಸೋಂಕು ಪತ್ತೆಯಾಗಿದೆ. ಒಂದು ದಿನದಲ್ಲಿ 1,66,631 ಜನರಿಗೆ ಕರೊನಾ ಪರೀಕ್ಷೆ ಮಾಡಲಾಗಿದೆ.

ಒಟ್ಟಾರೆ ಕರೊನಾ ಸೋಂಕಿತರ ಸಂಖ್ಯೆ 28,62,338ಕ್ಕೆ ಏರಿಕೆಯಾಗಿದೆ. ಅದರಲ್ಲಿ 27,87,111 ಸೋಂಕಿತರು ಗುಣಮುಖವಾಗಿದ್ದು, 39,603 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಇಂದು ಒಂದೇ ದಿನದಲ್ಲಿ 3,081 ಸೋಂಕಿತರು ಗುಣಮುಖರಾಗಿದ್ದಾರೆ. 24 ಗಂಟೆಗಳಲ್ಲಿ 75 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೆ ಮೃತರ ಸಂಖ್ಯೆ 35,601ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.1.64ರಷ್ಟಿದ್ದರೆ ಮರಣ ಪ್ರಮಾಣ ಶೇ. 2,73ರಷ್ಟಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 611 ಮಂದಿಯಲ್ಲಿ ಸೋಂಕು ದೃಢವಾಗಿದೆ. ಉಳಿದಂತೆ ದಕ್ಷಿಣ ಕನ್ನಡದಲ್ಲಿ 304, ಮೈಸೂರಿನಲ್ಲಿ 248, ಹಾಸನದಲ್ಲಿ 220, ಚಿಕ್ಕಮಗಳೂರು 151, ಶಿವಮೊಗ್ಗ 149, ಕೊಡಗು 148, ಬೆಳಗಾವಿ 120, ತುಮಕೂರು 112, ಉಡುಪಿ 101 ಪ್ರಕರಣಗಳು ಪತ್ತೆಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಹೊಸ ಸೋಂಕಿತರ ಸಂಖ್ಯೆ ಎರಡಂಕಿಯಲ್ಲಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net