ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್​

devegowda
Published on

ಬೆಂಗಳೂರು: ಜೆಡಿಎಸ್​ ವರಿಷ್ಠ ಎಚ್​.ಡಿ. ದೇವೇಗೌಡ ಮತ್ತು ಇವರ ಪತ್ನಿ ಚನ್ನಮ್ಮ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ದೇವೇಗೌಡ ದಂಪತಿ ಇಬ್ಬರಿಗೂ ಕರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಮಾ.31ರಂದು ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕರೊನಾ ಸೋಂಕು ನಿವಾರಣೆಯಾಗಿ ಆರೋಗ್ಯ ಚೇತರಿಸಿಕೊಂಡಿದ್ದು, ಇಬ್ಬರನ್ನೂ ಇಂದು ಮಧ್ಯಾಹ್ನ ಡಿಸ್ಚಾರ್ಜ್​ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net