ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕರೊನಾ ಭೀತಿ; ಮನೆಯ ಗೇಟ್​ ಮೇಲೆ 'ನಿಷೇಧ'ದ ಬೋರ್ಡ್​

Siddaramaiha 24 June 20
Published on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೊನಾ ಭೀತಿ ಎದುರಾಗಿದೆ. ಹಾಗಾಗಿ ಅವರ ಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಬೆಂಗಳೂರಿನಲ್ಲಿ ದಿನೇದಿನೆ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸಿದ್ದರಾಮಯ್ಯನವರ ಮನೆಯಿರುವ ಗಾಂಧಿಭವನದ ರಸ್ತೆಯಲ್ಲಿ ನಿನ್ನೆ ಕರೊನಾ ಸೋಂಕಿತನೋರ್ವ ಓಡಾಡಿದ್ದಾನೆ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಸಿದ್ದರಾಮಯ್ಯನವರು ಮುಂಜಾಗೃತಾ ಕ್ರಮ ತೆಗೆದುಕೊಂಡಿದ್ದಾರೆ.

ಕರೊನಾ ವೈರಸ್​ ಹೆಚ್ಚುತ್ತಿರು ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶ ಹಾಗೂ ಭೇಟಿಯನ್ನು ನಿಷೇಧಿಸಲಾಗಿದೆ. ಹಾಗಾಗಿ ಎಲ್ಲರೂ ಸಹಕರಿಸಬೇಕು ಎಂದು ಮನೆಯ ಗೇಟ್​ ಮೇಲೆ ಬೋರ್ಡ್​ ಹಾಕಿಸಿದ್ದಾರೆ. ಇನ್ನು ಮುಂದೆ ಸಿದ್ದರಾಮಯ್ಯನವರ ನಿವಾಸಕ್ಕೆ ಸಾರ್ವಜನಿಕರು ಗುಂಪಾಗಿ ಹೋದರೆ ಗೇಟ್​ ಒಳಗೆ ಪ್ರವೇಶ ಇರುವುದಿಲ್ಲ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net