ರಾಜ್ಯದಲ್ಲಿ 4 ಲಕ್ಷದ ಗಡಿ ದಾಟಿದ ಕರೊನಾ ಸೋಂಕಿತರ ಸಂಖ್ಯೆ; ಬೆಂಗಳೂರಿನಲ್ಲೇ ಲಕ್ಷ ಮೀರಿದೆ

Coronavirus
Published on

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 9,217 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,30,947ಕ್ಕೆ ಏರಿಕೆಯಾಗಿದೆ. ಹಾಗೇ ಒಂದೇ ದಿನದಲ್ಲಿ 7,021 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. 129 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾಗಿ ಡಿಸ್​ಚಾರ್ಜ್ ಆದವರ ಒಟ್ಟು ಸಂಖ್ಯೆ 3,22,454. ಮೃತರಾದವರು 6937 ಮಂದಿ ಹಾಗೂ ಒಟ್ಟು ಸಕ್ರಿಯ ಪ್ರಕರಣಗಳು 1,01,537. ಐಸಿಯುದಲ್ಲಿ ಚಿಕಿತ್ಸೆ ಪಡೆಯುತ್ತಿರುವವರು 768 ಸೋಂಕಿತರು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಚಪ್ಪಲಿಗಳಿಗೆ ಫ್ರೇಮ್​ ಹಾಕಿಸಿ ಅರ್ನಬ್​ ಗೋಸ್ವಾಮಿ ಆಫೀಸ್​ಗೆ ತೆಗೆದುಕೊಂಡು ಹೋದ ಅನುರಾಗ್ ಕಶ್ಯಪ್​

ಬೆಂಗಳೂರಿನಲ್ಲಿಯೇ ಸೋಂಕಿತರ ಸಂಖ್ಯೆ ಲಕ್ಷದ ಗಡಿ ದಾಟಿದ್ದು, 1,60,205ಕ್ಕೆ ಏರಿಕೆಯಾಗಿದೆ. ಅದರಲ್ಲಿ ಸಕ್ರಿಯ ಪ್ರಕರಣಗಳು 43656. ಇಂದು ಒಂದೇ ದಿನ ಇಲ್ಲಿ 33 ಮಂದಿ ಕರೊನಾಕ್ಕೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 2340ಕ್ಕೆ ಏರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net