

ಬೆಂಗಳೂರು: ಕರ್ನಾಟಕದಲ್ಲಿ ಸಾವಿರಕ್ಕಿಂತ ಕಡಿಮೆಯಾಗಿದ್ದ ಏಕದಿನ ಕರೊನಾ ಪ್ರಕರಣಗಳ ಸಂಖ್ಯೆ ಮಂಗಳವಾರದಿಂದ ಮತ್ತೆ ಏರಿಕೆ ಕಾಣಲಾರಂಭಿಸಿದೆ. ಬುಧವಾರ ರಾಜ್ಯದಲ್ಲಿ 1,240 ಪ್ರಕರಣಗಳು ದೃಢವಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 9,04,665ಕ್ಕೆ ಏರಿದೆ. 24 ಗಂಟೆಗಳಲ್ಲಿ 1,403 ಮಂದಿ ಗುಣಮುಖರಾಗಿದ್ದು, ಒಟ್ಟಾರೆಯಾಗಿ ಚೇತರಿಸಿಕೊಂಡವರ ಸಂಖ್ಯೆ 8,77,199ಕ್ಕೆ ಹೆಚ್ಚಳವಾಗಿದೆ. ಕೇವಲ 15,476 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ.
ಬುಧವಾರ ಆರು ಜನರು ಕರೊನಾ ಸೋಂಕಿನಿಂದಾಗಿ ಮೃತರಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಸೋಂಕಿನಿಂದಾಗಿ ಮೃತರಾದವರ ಸಂಖ್ಯೆ 11,971ಕ್ಕೆ ಏರಿಕೆಯಾಗಿದೆ. ಸದ್ಯ 248 ಜನರು ರಾಜ್ಯದ ವಿವಿಧ ಆಸ್ಪತ್ರೆಗಳ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 676 ಜನರಲ್ಲಿ ಕರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ನಗರದಲ್ಲಿನ ಒಟ್ಟಾರೆ ಕರೊನಾ ಸೋಂಕಿತರ ಸಂಖ್ಯೆ 3,80,247ಕ್ಕೆ ಏರಿದೆ. ಅದರಲ್ಲಿ 3,65,579 ಮಂದಿ ಗುಣಮುಖರಾಗಿದ್ದು, 4,245 ಮಂದಿ ಮೃತರಾಗಿದ್ದಾರೆ. 10,422 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಿದೆ.