

ಬೆಂಗಳೂರು: ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಕರೊನಾ ಒಂಬತ್ತು ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರಿನ 13 ವರ್ಷದ ಬಾಲಕನಿಗೂ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 512ಕ್ಕೆ ಏರಿದೆ.
ಇಲ್ಲಿಯವರೆಗೆ 193 ಮಂದಿಯನ್ನು ಬಿಡುಗಡೆ ಮಾಡಲಾಗಿದ್ದು, 19 ಮಂದಿ ಮೃತಪಟ್ಟಿದ್ದಾರೆ. ಗರ್ಭಿಣಿ ಸೇರಿದಂತೆ 299 ಮಂದಿ ಸಾಮಾನ್ಯ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಐವರನ್ನು ಐಸಿಯುನಲ್ಲಿ ಇಡಲಾಗಿದೆ.
ಹೊಸ ಸೋಂಕಿತರ ಪೈಕಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ 2, ವಿಜಯಪುರದಲ್ಲಿ 2, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ 1, ಮಳವಳ್ಳಿಯಲ್ಲಿ 1, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2, ಬೆಂಗಳೂರಿನಲ್ಲಿ 1 ಪ್ರಕರಣಗಳು ಪತ್ತೆಯಾಗಿವೆ.
ಯಾವ ಜಿಲ್ಲೆಗಳಲ್ಲಿ ಎಷ್ಟು ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ: