ಶಿಕ್ಷಕ ಸೇವೆ ಸಾರ್ಥಕ| ವೃತ್ತಿ ಗೌರವ ಹೆಚ್ಚಿಸಿದ ಕರೊನಾ

T 3
Published on

ಜಗತ್ತಿನಲ್ಲಿ ಶಿಕ್ಷಕರಿಗಿಂತ ಪವಿತ್ರ ವೃತ್ತಿ ಬೇರೊಂದಿಲ್ಲ. ತಾವು ಕಷ್ಟ-ಕಾರ್ಪಣ್ಯಗಳ ಬೆಂಕಿಯಲ್ಲಿ ಬೇಯುತ್ತಿದ್ದರೂ ಮಕ್ಕಳನ್ನು ಪುಟಕ್ಕಿಟ್ಟ ಚಿನ್ನದಂತೆ ರೂಪಿಸುವ ಮಹಾನುಭಾವರು ಅವರು. ಸಂಬಳಕ್ಕಾಗಿ ದುಡಿಯದೆ, ಮಕ್ಕಳ ಭವಿಷ್ಯ ರೂಪಿಸುವ ನಿಸ್ವಾರ್ಥ ಸೇವೆಗೆ ತಮ್ಮನ್ನು ಸಮರ್ಪಿಸಿಕೊಳ್ಳುವ ವಿಶಿಷ್ಟ ಸಮುದಾಯವೇ ಶಿಕ್ಷಕರು. ಕರೊನಾ ಸಂಕಷ್ಟದ ಸಂದರ್ಭದಲ್ಲೂ ಮಕ್ಕಳ ಭವಿಷ್ಯ ಮನೆಯ ನಾಲ್ಕು ಗೋಡೆಗಳ ನಡುವೆ ಮುರುಟಿಹೋಗದಂತೆ ಶಿಕ್ಷಕರು ವಹಿಸಿದ ಕಾಳಜಿ ಎಂದೆಂದಿಗೂ ಸ್ಮರಣೀಯ. ಕರೊನಾ ಕಾಲದಲ್ಲಿ ಅನೇಕ ಸವಾಲುಗಳನ್ನು ಮೆಟ್ಟಿನಿಂತು ನವನವೀನ ಪ್ರಯತ್ನ, ಪ್ರಯೋಗಗಳ ಮೂಲಕ ವಿದ್ಯಾರ್ಥಿಗಳನ್ನು ತಲುಪಿದ ಅನುಭವಗಳನ್ನು ನಾಡಿನ ಸಾವಿರಾರು ಶಿಕ್ಷಕರು ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ವಿಜಯವಾಣಿ ಜತೆ ಹಂಚಿಕೊಂಡಿದ್ದು, ಕೆಲವು ಆಯ್ದ ಅನುಭವಗಳನ್ನು ಇಲ್ಲಿ ಪ್ರಕಟಿಸಲಾಗಿದೆ. ನಾಡಿನ ಎಲ್ಲ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನದ ಶುಭಾಶಯಗಳು.

ವೃತ್ತಿ ಗೌರವ ಹೆಚ್ಚಿಸಿದ ಕರೊನಾ

ಶಿಕ್ಷಕ ವೃತ್ತಿ ಒಂದು ಚಾಲೆಂಜ್ ಅಂತ ತಿಳಿದಿತ್ತು. ಆದರೆ ಅದರ ನಿಜವಾದ ಅನುಭವ ಕಂಡುಬಂದಿದ್ದು ಕರೊನಾ ಕಾಲದಲ್ಲಿ. ಪೋನ್, ಇಂಟರ್ನೆಟ್ ಸೇರಿ ಯಾವುದೇ ಸೌಲಭ್ಯ ಸಮರ್ಪಕವಾಗಿಲ್ಲದ ಗ್ರಾಮೀಣ ಮಕ್ಕಳು ಕಲಿಯುವು ದಾದರೂ ಹೇಗೆ ಎಂಬ ಪ್ರಶ್ನೆ ಕಾಡುತ್ತಿತ್ತು. ಸರ್ಕಾರದ ವಿದ್ಯಾಗಮ ಕಾರ್ಯಕ್ರಮ ಸಲುವಾಗಿ ಮನೆಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳು, ಪಾಲಕರಲ್ಲಿ ಆತ್ಮಸ್ಥೈರ್ಯ ತುಂಬುವ ಮಾಡಲಾಯಿತು. ಕರೊನಾದಿಂದ ಕೂಲಿ ಇಲ್ಲದ ಸಂದರ್ಭದಲ್ಲಿ ಅಕ್ಕಿ, ಬೇಳೆ, ಹಾಲಿನ ಪುಡಿ ಕೊಟ್ಟು ಮನೆ ಬಾಗಿಲಿಗೆ ಬಂದು ಪಾಠ ಹೇಳಿಕೊಡುವ ಗುರುಎಂದು ಕೈ ಮುಗಿದಾಗ ನನ್ನ ಶಿಕ್ಷಕ ವೃತ್ತಿ ಗೌರವ ಹೆಚ್ಚಾಗಿ ಬದುಕು ಸಾರ್ಥಕವೆನಿಸಿತು.

| ಸತ್ಯನಾರಾಯಣ ಶಿಕ್ಷಕ, ಬಸವನಹಳ್ಳಿ, ಚಿಕ್ಕಮಗಳೂರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net