

ನವದೆಹಲಿ: ಕರೊನಾ ಪೀಡಿತ ಓರ್ವ ವ್ಯಕ್ತಿಯಿಂದ ಉತ್ತರ ಪ್ರದೇಶದ 14 ಗ್ರಾಮಗಳನ್ನು ಸೀಲ್ಡೌನ್ ಮಾಡಲಾಗಿದೆ.
ಪ್ರಾರ್ಥನಾ ಮಂದಿರದಲ್ಲಿ ತಂಗಿದ್ದ, ಆಂಧ್ರ ಪ್ರದೇಶದ ವ್ಯಕ್ತಿಗೆ ಸೋಂಕು ಹರಡಿರುವುದು ದೃಢಪಟ್ಟ ನಂತರ ಆತ ವಾಸ ಮಾಡುತ್ತಿದ್ದ ಉತ್ತರ ಪ್ರದೇಶದ ಗ್ರಾಮದ ಸುತ್ತಲಿನ 14 ಹಳ್ಳಿಗ ಸೀಲ್ ಮಾಡಲಾಗಿದೆ.
ಆಂಧ್ರಪ್ರದೇಶದ ವ್ಯಕ್ತಿ ಮಾರ್ಚ್ನಲ್ಲಿ ದೆಹಲಿಯಲ್ಲಿ ನಡೆದ ನಿಜಾಮುದ್ದೀನ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲಿಂದ ತೆರಳಿದ ಅವರು ಉತ್ತರ ಪ್ರದೇಶದಲ್ಲಿದ್ದ ಮಸೀದಿಯಲ್ಲಿ ತಂಗಿದ್ದರು. ಅವರಿಗೆ ಸೋಂಕು ಹರಡಿರುವುದು ದೃಢಪಟ್ಟ ನಂತರ 14 ಗ್ರಾಮಗಳನ್ನು ಸೀಲ್ಡೌನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸೋಂಕು ಪೀಡಿತ ವ್ಯಕ್ತಿ ವಾಸಿಸುತ್ತಿದ್ದ ಹಳ್ಳಿಯಿಂದ ಮೂರು ಕಿಲೋ ಮೀಟರ್ ಪ್ರದೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೆ ಸುತ್ತಲಿನ 14 ಗ್ರಾಮಗಳನ್ನು ಸೀಲ್ಡೌನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ್ ಪ್ರಶಾಂತ್ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ 483 ಮಂದಿಗೆ ಕರೊನಾ ವೈರಸ್ ಸೋಂಕು ಹರಡಿದೆ. ಇವರಲ್ಲಿ 5 ಮಂದಿ ಮೃತಪಟ್ಟಿದ್ದಾರೆ ಎಂದು ಉತ್ತರ ಪ್ರದೇಶದ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್)