

ಮಂಡ್ಯ: ಕರೊನಾ ಸೋಂಕಿಗೆ ಒಳಗಾಗಿದ್ದ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಕಾಮೇಗೌಡ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾದರು.
ಸೋಂಕಿನಿಂದ ಚೇತರಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಮಿಮ್ಸ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತದಿಂದ ಅವರಿಗೆ ಪುಷ್ಪವೃಷ್ಟಿ ಮಾಡಿ, ಗುಲಾಬಿ ಹೂ ನೀಡಿ ಅಭಿನಂದಿಸಲಾಯಿತು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕಾಮೇಗೌಡ, ಆಸ್ಪತ್ರೆಯಲ್ಲಿ ವೈದ್ಯರು ನನ್ನನ್ನು ಬಹಳ ಚೆನ್ನಾಗಿ ನೋಡಿಕೊಂಡರು. ಇಲ್ಲದಿದ್ದರೆ ನಾನು ಇಷ್ಟೊತ್ತಿಗೆ ಏನಾಗುತ್ತಿದ್ದೆ ಎಂಬುದು ಗೊತ್ತಿರಲಿಲ್ಲ ಎಂದರು.
ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಮಿಮ್ಸ್ ನಿರ್ದೇಶಕ ಡಾ.ಜಿ.ಎಂ.ಪ್ರಕಾಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ. ಮಂಚೇಗೌಡ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ಇತರರಿದ್ದರು. ಕಾಮೇಗೌಡ ಅವರನ್ನು ಆರೋಗ್ಯ ಇಲಾಖೆಯ ವಿಶೇಷ ವಾಹನದಲ್ಲಿ ಅವರ ಸ್ವಗ್ರಾಮ ದಾಸನದೊಡ್ಡಿಗೆ ಕಳುಹಿಸಿಕೊಡಲಾಯಿತು.