ಈ ಊರಲ್ಲಿ ಒಂದೇ ದಿನ 33 ಮಂದಿಗೆ ವಕ್ಕರಿಸಿದ ಕರೊನಾ​!

Corona
Published on

ಬೀದರ್: ಗಡಿ ಜಿಲ್ಲೆಯಲ್ಲಿ ಕರೊನಾ ರಣಕೇಕೆ ಹಾಕುತ್ತಿದ್ದು, ಇಂದು(ಶನಿವಾರ) 42 ಮಂದಿಗೆ ಸೋಂಕು ದೃಢಪಟ್ಟಿದೆ! ಈ ಒಂದು ವಾರದಲ್ಲೇ 100 ಜನರಿಗೆ ಕೋವಿಡ್​19 ಪಾಸಿಟಿವ್ ಬಂದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.

ಬೀದರ್​ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 350ಕ್ಕೆ ಏರಿದೆ. ಬಸವಕಲ್ಯಾಣ ತಾಲೂಕಿನಲ್ಲೇ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯಲ್ಲಿ ಇಂದು 42 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಆ ಪೈಕಿ 33 ಮಂದಿ ಬಸವಕಲ್ಯಾಣ ತಾಲೂಕಿನವರು! ಇದನ್ನೂ ಓದಿರಿ ಮಂಗಳಮುಖಿ ಆಗಲು ಹೊರಟಿದ್ದ ಬಾಲಕನ ಬದುಕಲ್ಲಿ ರೋಚಕ ತಿರುವು!

ಈ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಹೆಲ್ತ್ ಬುಲೆಟಿನ್​ನಲ್ಲೂ ಅಧಿಕೃತ ಅಂಕಿಅಂಶ ಹೊರಬಿದ್ದಿದೆ. ಜಿಲ್ಲೆಯಲ್ಲಿ ದಿನೇ ದಿನೆ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಹೊಸದಾಗಿ ಬರುತ್ತಿರುವ ಎಲ್ಲ ಪಾಸಿಟಿವ್ ಪ್ರಕರಣಗಳಿಗೆ ಮಹಾರಾಷ್ಟ್ರ ಲಿಂಕ್ ಇದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net