ಮಂಡ್ಯದ ಕಾಮೇಗೌಡರ ಆರೋಗ್ಯ ಗಂಭೀರ

kamegowda in mandya 1
Published on

ಮಂಡ್ಯ: ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ.

ಎರಡು ವಾರಗಳ ಹಿಂದೆ ಕಾಲು ಗಾಯಯೊಂಡು ಅನಾರೋಗ್ಯಕ್ಕೀಡಾಗಿದ್ದ ಕಾಮೇಗೌಡರಿಗೆ ತುರ್ತು ಚಿಕಿತ್ಸಾ ವಾಹನದಲ್ಲಿ ನಿತ್ಯ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿ, ಮತ್ತೆ ಮನೆಗೆ ಬಿಡಲಾಗುತ್ತಿತ್ತು. ಮೂರು ದಿನಗಳ ಹಿಂದಷ್ಟೇ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದರಿಂದ ಮಂಡ್ಯದ ಕೋವಿಡ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

''ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿರುವುದು ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ವೈದ್ಯಕೀಯ ಕಾಲೇಜಿನ ನಿರ್ದೇಶಕರಿಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಒದಗಿಸಬೇಕೆಂದು ಸೂಚನೆ ನೀಡಿದ್ದೇನೆ. ಇಡೀ ದೇಶಕ್ಕೆ ಸ್ಫೂರ್ತಿಯಾಗಿರುವ ಕಾಮೇಗೌಡರು ಶೀಘ್ರ ಗುಣಾಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ'' ಎಂದು ಡಾ.ಕೆ.ಸುಧಾಕರ್​ ಟ್ವೀಟ್ ಮಾಡಿದ್ದಾರೆ.

ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಕೂಡ, ''ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ'' ಟ್ವೀಟ್​ ಮೂಲಕ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net