

ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರಿಗೆ ಕರೊನಾ ಸೋಂಕು ತಗುಲಿದೆ.
ಈ ಬಗ್ಗೆ ಸ್ವತಃ ಸದಾನಂದ ಗೌಡರೇ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೋವಿಡ್ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಕರೊನಾ ಪರೀಕ್ಷೆಗೆ ಒಳಪಟ್ಟಿದ್ದೆ. ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಹಾಗಾಗಿ ಐಸೋಲೇಶನ್ಗೆ ಒಳಪಟ್ಟಿದ್ದೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ನನಗೆ ಕರೊನಾ ಸೋಂಕು ತಗುಲಿದೆ. ಹಾಗಾಗಿ ಇತ್ತೀಚಿಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯ ಬಗ್ಗೆ ಜಾಗ್ರತೆ ವಹಿಸಿಕೊಳ್ಳಿ. ಕೆಲ ದಿನ ಮನೆಯಲ್ಲಿದ್ದು, ಆರೋಗ್ಯ ಕಾಪಾಡಿಕೊಳ್ಳಿ ಎಂದು ಸದಾನಂದ ಗೌಡರು ಮನವಿ ಮಾಡಿದ್ದಾರೆ.