ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿಗೆ ಕರೊನಾ ಪಾಸಿಟಿವ್​

HDK
Published on

ಬೆಂಗಳೂರು: ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್​ ಮೂಲಕ ಕುಮಾರಸ್ವಾಮಿ ಮಾಹಿತಿ ಹಂಚಿಕೊಂಡಿದ್ದಾರೆ. 'ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ' ಎಂದು ತಿಳಿಸಿದ್ದಾರೆ. ಇತ್ತೀಚಿಗೆ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಮತ್ತು ಅವರ ಪತ್ನಿ ಚನ್ನಮ್ಮ ಅವರಿಗೂ ಕರೊನಾ ಸೋಂಕು ತಗುಲಿತ್ತು. ಗುಣಮುಖರಾಗಿದ್ದಾರೆ.

ನಿನ್ನೆಯಷ್ಟೇ ಸಿಎಂ ಯಡಿಯೂರಪ್ಪ ಅವರಿಗೆ ಕರೊನಾ ಪಾಸಿಟಿವ್​ ಬಂದಿದ್ದು, ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಎಂ ಅಳಿಯ ನಿರಂಜನ್ ಮತ್ತು ಮೊಮ್ಮಗಳು ಸೌಂದರ್ಯ ಅವರಿಗೂ ಕರೊನಾ ಪಾಸಿಟಿವ್ ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net