ಸಚಿವ ಶಿವರಾಮ್​ ಹೆಬ್ಬಾರ್​ ಮತ್ತು ಪತ್ನಿಗೂ ಕರೊನಾ ಪಾಸಿಟಿವ್

Shivaram Hebbar
Published on

ಬೆಂಗಳೂರು: ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಮ್​ ಹೆಬ್ಬಾರ್​ ಮತ್ತು ಅವರ ಪತ್ನಿ ವನಜಾಕ್ಷಿ ಹೆಬ್ಬಾರ್​ ಅವರಿಗೂ ಕರೊನಾ ಪಾಸಿಟಿವ್ ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಸಚಿವರೇ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ''ಇಂದು ನಾನು ಹಾಗೂ ನನ್ನ ಧರ್ಮಪತ್ನಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆವು. ಪರೀಕ್ಷಾ ವರದಿಯಲ್ಲಿ ಇಬ್ಬರಿಗೂ ಪಾಸಿಟಿವ್ ಎಂದು ಬಂದಿದೆ'' ಎಂದು ತಿಳಿಸಿದ್ದಾರೆ. ಇದನ್ನೂ ಓದಿರಿ ಕರೊನಾ ಪಾಸಿಟಿವ್ ಪ್ರಕರಣ 300ರ ಆಸುಪಾಸು

''ಯಾವುದೇ ಹೆಚ್ಚಿನ ರೋಗಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್​ನಲ್ಲಿದ್ದು ಚಿಕಿತ್ಸೆ ತೆಗೆದುಕೊಳ್ಳುತ್ತೇನೆ. ನಿಮ್ಮೆಲ್ಲರ ಆಶೀರ್ವಾದ, ಹಾರೈಕೆಯಿಂದ ಶೀಘ್ರ ಗುಣಮುಖವಾಗುವ ವಿಶ್ವಾಸವಿದೆ'' ಎಂದು ಸಚಿವರು ಟ್ವೀಟ್​ ಮಾಡಿದ್ದಾರೆ.

ನನ್ನೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರು ಕರೊನಾ ತಪಾಸಣೆ ಮಾಡಿಸಿಕೊಳ್ಳಿ ಎಂದು ಸಚಿವರು ವಿನಂತಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net