

ಗದಗ: ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾನುವಾರವಷ್ಟೇ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೂ ಕರೊನಾ ಪಾಸಿಟಿವ್ ಬಂದಿತ್ತು. ಅವರು ಹೋಂ ಐಸೋಲೇಶನ್ನಲ್ಲಿದ್ದಾರೆ. ಇದೀಗ ಕಾಂಗ್ರೆಸ್ನ ಮತ್ತೊಬ್ಬ ಶಾಸಕ ಎಚ್.ಕೆ.ಪಾಟೀಲ್ಗೂ ಸೋಂಕು ದೃಢಪಟ್ಟಿದೆ. ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರೊನಾ ಟೆಸ್ಟ್ನಲ್ಲಿ ವರದಿ ಪಾಸಿಟಿವ್ ಬಂದಿರುವ ಬಗ್ಗೆ ಸತಃ ಎಚ್.ಕೆ.ಪಾಟೀಲ್ ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಿಮ್ಮೆಲ್ಲರ ಆಶೀರ್ವಾದದಿಂದ ಶೀಘ್ರ ಗುಣಮುಖನಾಗುವೆ. 10 ದಿನಗಳ ಕಾಲ ಕ್ವಾರಂಟೈನ್ಗೆ ಒಪಟ್ಟಿದ್ದೇನೆ ಎಂದಿರುವ ಎಚ್.ಕೆ.ಪಾಟೀಲ್, ತನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.