

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ರಾಹುಲ್ ಗಾಂಧಿಯೇ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ
ನನಗೆ ಕೋವಿಡ್ ಲಕ್ಷಣಗಳು ಸ್ವಲ್ಪ ಪ್ರಮಾಣದಲ್ಲಿ ಕಾಣಿಸಿಕೊಂಡಿದ್ದರಿಂದ ಪರೀಕ್ಷೆಗೆ ಒಳಗಾದೆ. ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಇತ್ತೀಚೆಗೆ ನನ್ನೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಪ್ರತಿಯೊಬ್ಬರೂ ದಯವಿಟ್ಟು ಸುರಕ್ಷತಾ ಪ್ರೋಟೋಕಾಲ್ ಅನುಸರಿಸಿ. ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ ಎಂದು ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಬೇಕಿದ್ದ ರಾಹುಲ್ ಗಾಂಧಿ ಅವರು ಮೊನ್ನೆಯಷ್ಟೇ ರದ್ದು ಮಾಡಿದ್ದರು. ಎಲ್ಲೆಡೆ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರ‍್ಯಾಲಿ ನಡೆಸುತ್ತಿಲ್ಲ. ಎಲ್ಲ ಪಕ್ಷದವರೂ ರ‍್ಯಾಲಿ, ಸಭೆಗಳನ್ನ ರದ್ದು ಮಾಡಬೇಕು ಎಂದು ಮನವಿ ಮಾಡಿದ್ದರು.