ಸಂಸದ ಶ್ರೀನಿವಾಸ್ ಪ್ರಸಾದ್‌ಗೆ ಕರೊನಾ, ಬೆಂಗಳೂರಿಗೆ ಶಿಫ್ಟ್

Srinivas prasad
Published on

ಮೈಸೂರು: ಸಂಸದ ಶ್ರೀನಿವಾಸ್ ಪ್ರಸಾದ್‌ ಅವರಿಗೂ ಕರೊನಾ ಪಾಸಿಟಿವ್ ದೃಢಪಟ್ಟಿದೆ.

ಜ್ವರ ಹಾಗೂ ಮೈ-ಕೈ ನೋವಿನಿಂದ ಬಳಲುತ್ತಿದ್ದ ಸಂಸದರು ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ಕರೊನಾ ಪರೀಕ್ಷೆಗೆ ಒಳಪಟ್ಟಿದ್ದರು. ವರದಿಯಲ್ಲಿ ಪಾಸಿಟಿವ್​ ಬಂದಿದೆ.

ಕರೊನಾ ಸೋಂಕು ತಗುಲಿರುವ ಶ್ರೀನಿವಾಸ್​ ಪ್ರಸಾದ್​ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದ್ದು, ಮೈಸೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಸಂಸದರ ಮನೆಯ 17ಕ್ಕೂ ಹೆಚ್ಚು ಸದಸ್ಯರ ಸ್ವ್ಯಾಬ್ ಪರೀಕ್ಷೆ ಮಾಡಲಾಗಿದೆ. ಶಾಸಕ ಹರ್ಷವರ್ಧನ್ ಸೇರಿ ಇತರರ ವರದಿ ನೆಗೆಟಿವ್ ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net