

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ತೀವ್ರತೆ ಹೆಚ್ಚಾಗಿದ್ದು, ಭಾನುವಾರ ಹೊಸದಾಗಿ 3,082 ಕರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಸೋಂಕು ಖಚಿತತೆ ಪ್ರಮಾಣ 2.89ಕ್ಕೆ ಏರಿಕೆಯಾಗಿದೆ. ಐದು ತಿಂಗಳ ಹಿಂದೆ 3 ಸಾವಿರಕ್ಕೂ ಅಧಿಕ ಕೋವಿಡ್ ಪ್ರಕರಣ ಪತ್ತೆಯಾಗಿದ್ದವು. ನಂತರ ಕಡಿಮೆಯಾಗಿದ್ದ ಸೋಂಕು ಪ್ರಕರಣ 2ನೇ ಅಲೆ ಕಾಣಿಸಿಕೊಂಡ ನಂತರ ಪುನಃ 3 ಸಾವಿರ ಗಡಿ ದಾಟಿದೆ. ಒಟ್ಟು ಸೋಂಕಿತರ ಸಂಖ್ಯೆ 9,87,012ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ 1,285 ಮಂದಿ ಗುಣಮುಖರಾಗಿದ್ದು, ಈವರೆಗೆ 9.51 ಲಕ್ಷ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 23,037ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಗಂಭೀರ ಆರೋಗ್ಯ ಸ್ಥಿತಿಯಲ್ಲಿರುವ 204 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಂಕಿಗೆ 12 ಬಲಿ: ಕರೊನಾ ಸೋಂಕಿನಿಂದ ಬಳಲುತ್ತಿದ್ದ 12 ಮಂದಿ ಭಾನುವಾರ ಸಾವಿಗೀಡಾಗಿದ್ದಾರೆ. ಈ ಮೂಲಕ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 12,504ಕ್ಕೆ ತಲುಪಿದೆ.