ರಾಜ್ಯದಲ್ಲಿ ಇಳಿಮುಖವಾಗುತ್ತಿದೆ ಕರೊನಾ ಪ್ರಸರಣ; ಇಂದು 8 ಹೊಸ ಪ್ರಕರಣಗಳು ಪತ್ತೆ, 511ಕ್ಕೆ ಏರಿದ ಸೋಂಕಿತರ ಸಂಖ್ಯೆ

Coronavirus 30 March 20
Published on

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 511ಕ್ಕೆ ಏರಿದೆ. ಅದರಲ್ಲಿ 19 ಮಂದಿ ಸಾವನ್ನಪ್ಪಿದ್ದು, 188 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ.

ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12ಗಂಟೆಯವರೆಗೆ ರಾಜ್ಯದಲ್ಲಿ ಎಂಟು ಹೊಸ ಕರೊನಾ ಪ್ರಕರಣಗಳು ಕಂಡುಬಂದಿವೆ. ಇತ್ತೀಚಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವುದು ತುಸು ನಿರಾಳ ಉಂಟು ಮಾಡಿದೆ.

ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ ಬೆಂಗಳೂರು ನಗರದಲ್ಲಿ 1, ಮಂಡ್ಯದ ನಾಗಮಂಗಲದಲ್ಲಿ 1, ದಕ್ಷಿಣ ಕನ್ನಡದಲ್ಲಿ ಇಬ್ಬರು, ಬಾಗಲಕೋಟೆ ಮತ್ತು ವಿಜಯಪುರಗಳಲ್ಲಿ ತಲಾ ಇಬ್ಬರು ಕರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಈ ಎಂಟು ಮಂದಿಯಲ್ಲಿ ಬೆಂಗಳೂರು ನಗರದಲ್ಲಿ ಪತ್ತೆಯಾದ ಕರೊನಾ ಸೋಂಕಿತನಿಗೆ ಯಾವುದೇ ಟ್ರಾವೆಲ್​ ಹಿಸ್ಟರಿ ಇಲ್ಲ. ಅವರು ಜ್ವರದಿಂದ ಬಳಲುತ್ತಿದ್ದರು ಎಂದು ವರದಿಯಾಗಿದ್ದು, ಆತಂಕಕ್ಕೆ ಕಾರಣವಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net