

ಶೃಂಗೇರಿ: ಮಾರಕ ಕರೊನಾ ವೈರಸ್ ಸೋಂಕು ಹರಡುವುದನ್ನು ತಪ್ಪಿಸಲು ಸರ್ಕಾರದ ಸಲಹೆಯಂತೆ ಧಾರ್ಮಿಕ ಕ್ಷೇತ್ರ ಶೃಂಗೇರಿಯಲ್ಲಿ ಸಾರ್ವಜನಿಕರಿಗೆ ವಸತಿ ಸೌಕರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ದೇವಾಲಯದ ಆಡಳಿತ ಕಚೇರಿ ಕೂಡ ಮುಚ್ಚಲಾಗಿದ್ದು ವಸತಿಯನ್ನು ರದ್ದುಪಡಿಸಲಾಗಿದೆ. ಮುಂದಿನ ಆದೇಶದವರೆಗೂ ಇದು ಜಾರಿಯಲ್ಲಿರುತ್ತದೆ ಎಂದು ಶೃಂಗೇರಿ ಶ್ರೀಶಾರದಾ ಪೀಠ ತಿಳಿಸಿದೆ.
ರಾಜ್ಯದಲ್ಲಿ ಕರೊನಾ ವೈರಸ್ ಸೋಂಕು ಹರಡುವುದನ್ನು ತಪ್ಪಿಸಲು ಸರ್ಕಾರ ಪ್ರಮುಖ ದೇವಾಲಯಗಳ ಬಾಗಿಲು ಮುಚ್ಚುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಪೀಠ ಈ ನಿರ್ಧಾರ ಕೈಗೊಂಡಿದೆ.