

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿತರ ಪ್ರಮಾಣ ಕಳೆದ ನಾಲ್ಕೈದು ದಿನಗಳಿಂದ ಹೆಚ್ಚುತ್ತಿದೆ. ನಿನ್ನೆ ಸಂಜೆ 5ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆವರೆಗೆ ಒಟ್ಟು 10 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 858ಕ್ಕೆ ಏರಿದೆ.
ರಾಜ್ಯದಲ್ಲಿ ನಿನ್ನೆ ಒಂದೇ ದಿನ 54 ಕೊವಿಡ್-19 ಸೋಂಕಿತರು ಪತ್ತೆಯಾಗಿದ್ದರು. ಇಂದು ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಅನ್ವಯ, ರಾಜ್ಯದಲ್ಲಿ ಕರೊನಾ ವೈರಸ್ನಿಂದ ಒಟ್ಟು 31 ಮಂದಿ ಮೃತಪಟ್ಟಿದ್ದಾರೆ. 422 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ದಾವಣಗೆರೆಯಲ್ಲಿ ಮೂರು ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, ಕಲಬುರಗಿ, ಹಾವೇರಿ, ವಿಜಯಪುರದಲ್ಲಿ ತಲಾ ಒಂದು, ಬಾಗಲಕೋಟೆ, ಬೀದರ್ನಲ್ಲಿ ತಲಾ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ.