ಭಾರತದಲ್ಲಿ ಏರುತ್ತಲೇ ಇದೆ ಕರೊನಾ ಸೋಂಕಿತರ ಸಂಖ್ಯೆ; 24ಗಂಟೆಯಲ್ಲಿ 34 ಮಂದಿ ಸಾವು, 909 ಜನರಲ್ಲಿ ವೈರಸ್​ ಪತ್ತೆ

Covid
Published on

ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಅಟ್ಟಹಾಸ ಮುಂದುವರಿಯುತ್ತಲೇ ಇದೆ. ಭಾರತದಲ್ಲಿ ಸೋಂಕಿತರ ಸಂಖ್ಯೆ 8356ಕ್ಕೆ ಏರಿಕೆಯಾಗಿದೆ.

ಕಳೆದ 24ಗಂಟೆಯಲ್ಲಿ 909 ಮಂದಿಯಲ್ಲಿ ಕರೊನಾ ಸೋಂಕು ಪತ್ತೆಯಾಗಿದ್ದು ಒಟ್ಟು 34 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಭಾರತದಲ್ಲಿ ಒಟ್ಟು ಸಾವಿನಸಂಖ್ಯೆ 273ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮಾ.24ರ ಮಧ್ಯರಾತ್ರಿಯಿಂದ ಭಾರತ ಲಾಕ್​ಡೌನ್​ ಆಗಿತ್ತು. ಏ.14ರವರೆಗೆ ಅದರ ಅವಧಿ ಇತ್ತು. ಆದರೆ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿ, ಲಾಕ್​ಡೌನ್ ಮುಂದುವರಿಸುವ ಸಂಬಂಧ ಚರ್ಚೆ ನಡೆಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net