

ಬೆಂಗಳೂರು: ಕರೊನಾ ಮಹಾಮಾರಿ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆಯನ್ನು ಹೆಚ್ಚು ಮಾಡುತ್ತಿರುವುದು ಮಾತ್ರವಲ್ಲದೇ, ಸಾವಿನ ಸಂಖ್ಯೆಯನ್ನೂ ಅಧಿಕಗೊಳಿಸುತ್ತಿದೆ. ಇಲ್ಲಿಯವರೆಗೆ 258 ಮಂದಿಗೆ ಸೋಂಕು ದೃಢಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ 11 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 65 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ. ಕಲಬುರ್ಗಿಯಲ್ಲಿ 55 ವರ್ಷದ ವ್ಯಕ್ತಿ, ಬೆಂಗಳೂರು ನಗರದಲ್ಲಿ 65 ವರ್ಷದ ಹಾಗೂ ವಿಜಯಪುರದಲ್ಲಿ 69 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಬಾಗಲಕೋಟೆ ಮತ್ತು ಕಲಬುರಗಿಯಲ್ಲಿ ತಲಾ 3, ಬೆಂಗಳೂರು ನಗರದಲ್ಲಿ 2, ವಿಜಯಪುರ, ಬೆಳಗಾವಿ, ಚಿಕ್ಕಬಳ್ಳಾಪುರದಲ್ಲಿ ತಲಾ ಒಂದು ಹೊಸ ಸೋಂಕು ಪ್ರಕರಣ ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ ಪತ್ತೆಯಾಗಿದೆ. ಸದ್ಯದಲ್ಲಿ ರಾಜ್ಯದಲ್ಲಿ ಸೋಂಕಿತರ ಸ್ಥಿತಿಗತಿ ಈ
ರೀತಿ ಇದೆ:
ಬೆಂಗಳೂರು ನಗರ 80, ಮೈಸೂರು 48, ಬೆಳಗಾವಿ 18, ಕಲಬುರಗಿ 16, ಬೀದರ್ 13, ದಕ್ಷಿಣ ಕನ್ನಡ ಮತ್ತು ಬಾಲಕೋಟೆ ತಲಾ 12, ಉತ್ತರ ಕನ್ನಡ ಮತ್ತು ಚಿಕ್ಕಬಳ್ಳಾಪುರ ತಲಾ 9, ಮಂಡ್ಯ 8, ವಿಜಯಪುರ 7, ಬಳ್ಳಾರಿ ಮತ್ತು ಧಾರವಾಡ ತಲಾ 6, ಬೆಂಗಳೂರು ಗ್ರಾಮಾಂತರ 5, ದಾವಣಗೆರೆ ಮತ್ತು ಉಡುಪಿ ತಲಾ 3, ಕೊಡಗು, ತುಮಕೂರು ಮತ್ತು ಗದಗ ತಲಾ ಒಬ್ಬರು.
ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್ ಅಪ್ಲಿಕೇಷ್ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.