'ಕ್ಷೇಮವಾಗಿ ಬಂದರೆ ನಿಮ್ಮ ಸೇವೆ..ಇಲ್ಲದಿದ್ದರೆ ಕ್ಷಮಿಸಿಬಿಡಿ..' : ಕೈಮುಗಿದ ಮುನಿರತ್ನ

Munirathna
Published on

ಬೆಂಗಳೂರು: ಕರೊನಾ ವೈರಸ್​ ಹಲವು ರಾಜಕಾರಣಿಗಳಿಗೆ ತಗುಲಿದೆ. ಸಚಿವರು, ಶಾಸಕರು..ಸಂಸದರು ಒಬ್ಬೊಬ್ಬರಾಗಿ ಸೋಂಕಿಗೆ ಒಳಗಾಗುತ್ತಿದ್ದಾರೆ.

ಇದೀಗ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮುನಿರತ್ನ ಅವರಲ್ಲಿಯೂ ಕರೊನಾ ಇರುವುದು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್​ ಮಾಡಿದ್ದಾರೆ.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ನನ್ನ ಎಲ್ಲ ಮತದಾರ ದೇವರುಗಳಿಗೆ ವಂದನೆಗಳು. 57 ವರ್ಷದವನಾದ ನಾನು, ಇಂದು ಕೊವಿಡ್​-19 ಪರೀಕ್ಷೆ ಮಾಡಿಸಿದಾಗ ಪಾಸಿಟಿವ್​ ವರದಿ ಬಂದಿದೆ. ಕ್ಷೇಮವಾಗಿ ಬಂದರೆ ನಿಮ್ಮ ಸೇವೆ...ಇಲ್ಲದಿದ್ದರೆ ಕ್ಷಮಿಸಿಬಿಡಿ. ಇಂತಿ ನಿಮ್ಮ ಸೇವಕ ಮುನಿರತ್ನ ಎಂದು ತುಸು ಭಾವನಾತ್ಮಕವಾಗಿ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net