ಸೋಮವಾರ ಒಂದೇ ದಿನ ರಾಜ್ಯದಲ್ಲಿ 7 ಮಂದಿ ಕರೊನಾ ಸೋಂಕು ಪೀಡಿತರು ಪತ್ತೆ

coronavirus-graphic-web-feature
Published on

ಬೆಂಗಳೂರು: ರಾಜ್ಯದಲ್ಲಿ ಕರೊನಾ ವೈರಸ್​ ಸೋಂಕಿತರ ಸಂಖ್ಯೆ ಸೋಮವಾರ ಸಂಜೆ ವೇಳೆಗೆ 33ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಇಲಾಖೆ ಈ ಮಾಹಿತಿ ನೀಡಿದೆ. ಕರೊನಾ ವೈರಸ್​ ಸೋಂಕಿತರಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ.

ಸೋಮವಾರ ಒಂದೇ ದಿನ ರಾಜ್ಯದ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ 3 ದಿನಗಳಲ್ಲಿ 13 ಮಂದಿಯಲ್ಲಿ ಸೋಂಕು ದೃಢಪಡ್ಡಿದೆ. ಸೋಂಕು ಹರಡುವುದನ್ನು ತಪ್ಪಿಸಲು ಸರ್ಕಾರ ಕೈಗೊಂಡಿರುವ ನಿರ್ಧಾರಗಳಿಗೆ ಕೈಜೋಡಿಸಬೇಕು ಎಂದು ಇಲಾಖೆ ತಿಳಿಸಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net