ರಾಜ್ಯದಲ್ಲಿ ಸೋಂಕು ಪ್ರಮಾಣ ದರ ಶೇ. 2.12ಕ್ಕೆ ಏರಿಕೆ

corona
Published on

ಬೆಂಗಳೂರು :ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2,298 ಹೊಸ ಕರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ದಿನದ ಸೋಂಕು ಪ್ರಮಾಣ ದರ ಶೇ. 2.12ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 16,886ಕ್ಕೆ ಹಾಗೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ 143ಕ್ಕೆ ಹೆಚ್ಚಳವಾಗಿದೆ.

ಸೋಂಕಿಗೆ ಬೆಂಗಳೂರಿನಲ್ಲಿ 7 ಮಂದಿ, ಮೈಸೂರಿನಲ್ಲಿ ಇಬ್ಬರು, ಧಾರವಾಡ, ಕಲಬುರಗಿ ಮತ್ತು ಕೊಪ್ಪಳದಲ್ಲಿ ತಲಾ ಒಬ್ಬರಂತೆ 12 ಮಂದಿ ಸಾವನ್ನಪ್ಪಿದ್ದು, ಮೃತರ ಸಮಖ್ಯೆ 12,461 ತಲುಪಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 9.75 ಲಕ್ಷ ಮೀರಿದ್ದು, 995 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರ ಸಂಖ್ಯೆ 9.46 ಲಕ್ಷ ದಾಟಿದೆ.

ಬೆಂಗಳೂರಿನಲ್ಲಿ 1,398, ಕಲಬುರಗಿ 118, ತುಮಕೂರು 94, ಬೀದರ್ 82, ಉಡುಪಿ 79, ಮೈಸೂರು 74, ಹಾಸನ 60, ದಕ್ಷಿಣ ಕನ್ನಡ 54, ಧಾರವಾಡ 38, ವಿಜಯಪುರ ಮತ್ತು ಬೆಂಗಳೂರು ಗ್ರಾಮಾಂತರ ತಲಾ 37, ಕೋಲಾರ 25 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net