

ನವದೆಹಲಿ: ರಾಷ್ಟ್ರದಲ್ಲಿ ಮಹಾಮಾರಿ ಕರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 6ಕ್ಕೇರಿದೆ. ಐವರು ಭಾರತೀಯರು ಹಾಗೂ ಓರ್ವ ಇಟಲಿ ಪ್ರಜೆ ಸೇರಿ ದೇಶದಲ್ಲಿ ಈವರೆಗೆ 6 ಮಂದಿ ಸಾವಿಗೀಡಾಗಿದ್ದಾರೆ.
ಕರೊನಾ ವೈರಸ್ ಸೋಂಕಿತ ಮುಂಬಯಿಯ ನಿವಾಸಿ 56 ವರ್ಷದ ಮಹಿಳೆ ಭಾನುವಾರ ಸಾವಿಗೀಡಾಗಿದ್ದಾರೆ. ಮುಂಬೈನ ಎಚ್.ಎನ್. ರಿಲಯನ್ಸ್ ಆಸ್ಪತ್ರೆಯಲ್ಲಿ ಮಾರ್ಚ್ 21ರಂದು ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೋವಿಡ್ 19 ಸೋಂಕಿನಿಂದ ಮೃತರಾಗಿದ್ದಾರೆ.
ಸದ್ಯ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 74ಕ್ಕೇರಿದೆ. ಭಾನುವಾರ ಮತ್ತೆ 10 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟಾರೆ ದೇಶದಲ್ಲಿ ಸೋಂಕಿತರ ಸಂಖ್ಯೆ 324 ಪ್ರಕರಣಗಳು ವರದಿಯಾಗಿವೆ. (ಏಜೆನ್ಸೀಸ್)