

ಮಂಗಳೂರು: ಶಂಕಿತ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಉಳ್ಳಾಲ ಮೂಲದ ವ್ಯಕ್ತಿ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದು ಆತಂಕ ಮೂಡಿಸಿದೆ.
ಈ ವ್ಯಕ್ತಿ ದುಬೈನಿಂದ ವಿಮಾನದಲ್ಲಿ ಬಂದಿದ್ದ. ಏರ್ಪೋರ್ಟ್ನಲ್ಲಿ ಸ್ಕ್ರೀನಿಂಗ್ ಟೆಸ್ಟ್ ಮಾಡಿದಾಗ ಆತನಲ್ಲಿ ಜ್ವರದ ಲಕ್ಷಣ ಕಂಡುಬಂದಿತ್ತು. ಕೊರೊನಾ ತಗುಲಿರಬಹುದಾದ ಶಂಕೆಯಲ್ಲಿ ರಾತ್ರಿಯೇ ವೆನ್ಲಾಕ್ಗೆ ಸೇರಿಸಲಾಗಿತ್ತು.
ಆತನ ತಪಾಸಣೆ ಪ್ರಕ್ರಿಯೆ ಪೂರ್ಣವಾಗುವ ಮೊದಲೇ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ರಾತ್ರಿ ಅಡ್ಮಿಟ್ ಆದವನು ಬೆಳಗ್ಗೆಯಷ್ಟರಲ್ಲಿ ತಪ್ಪಿಸಿಕೊಂಡಿದ್ದಾರೆ. ಈ ಬಗ್ಗೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಿಕಂದರ್ ಪಾಷಾ, ರೋಗಿಯ ವಿಳಾಸಕ್ಕೆ ಸಂಬಂಧಿಸಿದ ದಾಖಲೆಗಳು ನಮ್ಮ ಬಳಿ ಇವೆ. ಪತ್ತೆಗಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ’, ಪೊಲೀಸರ ನೆರವಿನಲ್ಲಿ ಆತನನ್ನು ವಶಕ್ಕೆ ಪಡೆಯಲಾಗುವುದು. ರಕ್ತ ಮತ್ತು ಇತರ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷಿಸಲಾಗುವುದು ಎಂದು ಪತ್ರಿಕೆಗೆ ತಿಳಿಸಿದ್ದಾರೆ.
ವೆನ್ಲಾಕ್‌ನಲ್ಲಿ ಚಿಕಿತ್ಸೆ ಪಡೆಯಲಿಚ್ಚಿಸದೆ ಬೇರೆ ಆಸ್ಪತ್ರೆಗೆ ದಾಖಲಾಗಿದ್ದಾರೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ. ಈ ನಡುವೆ ಕೊರೊನಾ ಶಂಕಿತ ವ್ಯಕ್ತಿಯ ಮನೆಗೆ ಬೀಗ ಹಾಕಿರುವುದೂ ತಿಳಿದುಬಂದಿದೆ.