ಕರೊನಾ ವೈರಸ್​ ಸೋಂಕು ತಡೆ ಸಂಪೂರ್ಣ ಜವಾಬ್ದಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್​ಗೆ ವಹಿಸಿದ ಸಿಎಂ

sri ramulu and sudakar 24 mar 20
Published on

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್​ ಅವರಿಗೆ ಕರೊನಾ ವೈರಸ್​ ನಿಯಂತ್ರಣದ ಸಂಪೂರ್ಣ ಜವಾಬ್ದಾರಿಯನ್ನು ನೀಡಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ತೀವ್ರವಾಗಿ ಹರಡುತ್ತಿರುವ ಸೋಂಕು ನಿಯಂತ್ರಿಸಲು ಆರೋಗ್ಯ ಸಚಿವ ಶ್ರೀರಾಮುಲು ವಿಫಲವಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಲ್ಲಿದ್ದ ವೈರಸ್​ ನಿಯಂತ್ರಣದ ಜವಾಬ್ದಾರಿಯನ್ನು ಡಾ.ಸುಧಾಕರ್​ಗೆ ವಹಿಸಿದ್ದಾರೆ.

ವೈದ್ಯರು ಆಗಿರುವ ಡಾ. ಸುಧಾಕರ್​ ವೈರಾಣು ಬಗ್ಗೆ ಜ್ಞಾನ ಹೊಂದಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಹೆಚ್ಚಿನ ಜವಾಬ್ದಾರಿ ವಹಿಸಿದ್ದಾರೆ. ವೈರಸ್​ ಸೋಂಕು ತಡೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳು, ಸೋಂಕು ಹರಡುವಿಕೆ ಸೇರಿದಂತೆ ಎಲ್ಲ ಮಾಹಿತಿಗಳನ್ನು ಇನ್ನು ಮುಂದೆ ಡಾ. ಸುಧಾಕರ್​ ನೀಡಲಿದ್ದಾರೆ.

ರಾಜ್ಯದಲ್ಲಿ ಸೋಂಕು ಪತ್ತೆಯಾಗುತ್ತಿದ್ದಂತೆ ಡಾ.ಸುಧಾಕರ್​ ಹೆಚ್ಚು ಆಸಕ್ತಿ ವಹಿಸಿ ಕರೊನಾ ವೈರಸ್​ ತಡೆಯುವ ಬಗ್ಗೆ ಸಲಹೆ ನೀಡುತ್ತಿದ್ದರು. ಸಚಿವರ ವ್ಯಾಪ್ತಿಗೆ ಬರದಿದ್ದರೂ ಅವರು ಶ್ರಮ ವಹಿಸುತ್ತಿದ್ದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net