ತಾರತಮ್ಯ ಸರಿಪಡಿಸಿ

post office strike
ಸೊರಬ ಪಟ್ಟಣದ ಪ್ರಧಾನ ಅಂಚೆ ಕಚೇರಿ ಮುಂಭಾಗ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ ತಾಲೂಕು ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಡಿ.ರಾಮಚಂದ್ರ, ಹನುಮೇಶ್, ಬಸವರಾಜಪ್ಪ, ಅಶೋಕ್ ಇತರರಿದ್ದರು.
Published on

ಸೊರಬ: ಅಂಚೆ ಆಡಳಿತ ವ್ಯವಸ್ಥೆಯಲ್ಲಿನ ತಾರತಮ್ಯ ಧೋರಣೆ ಖಂಡಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ ತಾಲೂಕು ಘಟಕದಿಂದ ಬುಧವಾರ ಪಟ್ಟಣದ ಪ್ರಧಾನ ಅಂಚೆ ಕಚೇರಿ ಮುಂಭಾಗ ಮುಷ್ಕರ ನಡೆಸಲಾಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಂಚೆ ಸೇವಕರ ಸಂಘದ ತಾಲೂಕು ಅಧ್ಯಕ್ಷ ಎಚ್.ಬಿ.ಮೂರ್ತಿ ಮಾತನಾಡಿ, ಸರ್ಕಾರದ ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಗ್ರಾಮೀಣ ಅಂಚೆ ಸೇವಕರು ಮೂರ‌್ನಾಲ್ಕು ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ನೌಕರರಿಗೆ ಸೌಲಭ್ಯಗಳನ್ನು ಕಲ್ಪಿಸುವಂತೆ ಅನೇಕ ಬಾರಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಾಗಿದೆ. ಈ ಹಿಂದೆ ದೆಹಲಿಯಲ್ಲಿ ಅನಿರ್ದಿಷ್ಟ ಅವಧಿ ಉಪವಾಸ ಕೈಗೊಂಡಾಗ ಅಂಚೆ ಅಧಿಕಾರಿಗಳು ಒಂದು ತಿಂಗಳೊಳಗೆ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಸುಮಾರು 16 ತಿಂಗಳು ಕಳೆದರೂ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದರು.
ಪ್ರತಿಭಟನೆಯಲ್ಲಿ ಗ್ರಾಮೀಣ ಅಂಚೆ ಸೇವಕರ ಸಂಘದ ಡಿ.ರಾಮಚಂದ್ರ, ಹನುಮೇಶ್, ಬಸವರಾಜಪ್ಪ, ಅಶೋಕ್, ನಾಗರಾಜ, ರಿದಾ ಬೇಗಂ, ಶಿಲ್ಪಾಗೌಡ, ಪಾರ್ವತಿ, ಬಸವಣ್ಯಪ್ಪ, ಪ್ರಿಯಾಂಕ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಿಂದ ಅಂಚೆ ಸೇವಕರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net