ಭ್ರಷ್ಟ ಅಧಿಕಾರಿಗಳಿಗೆ ಬೆಳಂಬೆಳಗ್ಗೆ ಲೋಕಾಯುಕ್ತ ಶಾಕ್! ರಾಜ್ಯದ 55 ಕಡೆ ದಾಳಿ

ವಿಜಯವಾಣಿ (60)
Published on

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ರಾಜ್ಯದ 12 ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ನಿದ್ರೆಯಿಂದ ಎದ್ದೇಳುವ ಮುನ್ನವೇ ದೊಡ್ಡ ಶಾಕ್ ನೀಡಿದೆ. ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಯಾದಗಿರಿ ಜಿಲ್ಲೆಯ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ಭ್ರಷ್ಟ ಅಧಿಕಾರಿಗಳಿಗೆ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಕೆಐಎಡಿಬಿ ಅವರ ನಿರ್ದೇಶಕನ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಸಿ.ಟಿ ಮುದ್ದುಕುಮಾರ್ ಅವರ ನಿರ್ದೇಶಕರು, ಕೆಐಎಡಿಬಿ. ಖನಿಜ ಭವನ ಬೆಂಗಳೂರು. ಮನೆ ಹಾಗೂ ಕಚೇರಿ ಮೇಲೆ ರೇಡ್​ ಮಾಡಲಾಗಿದೆ.

ಇಂದು ಬೆಳಿಗ್ಗೆಯಿಂದಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 58 ಸ್ಥಳಗಳಲ್ಲಿ ಶೋಧಕಾರ್ಯ ಆರಂಭಿಸಿರುವ ಲೋಕಾಯುಕ್ತ ಅಧಿಕಾರಿಗಳು, ತಮ್ಮ ಆದಾಯ ಮೂಲಕ್ಕಿಂತ ಹೆಚ್ಚು ಆಸ್ತಿ ಮಾಡಿಕೊಂಡವರ ವಿರುದ್ಧ ಕೇಳಿಬಂದಿದ್ದ 12 ದೂರುಗಳ ಬೆನ್ನಲ್ಲೇ ಲೋಕಾಯುಕ್ತ ಈ ದಾಳಿ ಕೈಗೊಂಡಿದೆ. ಇಲಾಖೆಯ 100ಕ್ಕೂ ಹೆಚ್ಚು ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net