

ರಾಣೆಬೆನ್ನೂರ: ಇಂದಿನ ಮಕ್ಕಳು ಹಾಗೂ ಯುವ ಜನತೆ ದೇಶದ ಸಂವಿಧಾನ ಅರಿತು, ಸ್ವಾತಂತ್ರ$್ಯ ಹೋರಾಟಗಾರರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ದೇಶಪ್ರೇಮ ಮೈಗೂಡಿಸಿಕೊಳ್ಳಬೇಕು ಎಂದು ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ನಾಗರಾಜ ಎಸ್. ಹೇಳಿದರು.
ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಸದ್ಗುರು ಶಿವಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜ್ನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಏರ್ಪಡಿಸಿದ್ದ ಸಂವಿಧಾನದ ಮೌಲ್ಯಗಳು ಎಂಬ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ವಿದ್ಯಾಥಿರ್ಗಳಿಗೆ ಸಂವಿಧಾನದ ಅರಿವು ಮುಖ್ಯವಾಗಿದ್ದು ವಿಶ್ವ ಮಾನ್ಯತೆಯನ್ನು ಪಡೆದ ನಮ್ಮ ಸಂವಿಧಾನವು ಆಧುನಿಕ ಭಾರತದಲ್ಲಿ ಸಮಾನತೆಯನ್ನು ಸಹಕಾರ ಗೊಳಿಸುವ ನಿಟ್ಟಿನಲ್ಲಿ ಮಹತ್ವದ ಮೈಲುಗಲ್ಲಾಗಿದೆ. ಈ ನೆಲದಲ್ಲಿ ಮೊದಲ ಬಾರಿಗೆ ಒಂದು ಕಾನೂನನ್ನು ಎಲ್ಲರಿಗೆ ಸಮಾನವಾಗಿ ಅಧಿಕೃತಗೊಳಿಸಿದ್ದು ನಮ್ಮ ಸಂವಿಧಾನ. ಆದ್ದರಿಂದ ನಮ್ಮ ದೇಶದ ಸಂವಿಧಾನದ ಮೌಲ್ಯಗಳನ್ನು ತಿಳಿದುಕೊಂಡು, ಸಂವಿಧಾನದ ಆಶಯದಂತೆ ಸಮ ಸಮಾಜ ನಿಮಾರ್ಣ ಮಾಡಲು ಪ್ರತಿಯೊಬ್ಬರು ಬದ್ಧರಾಗಬೇಕು. ಸಂವಿಧಾನದ ಮೌಲ್ಯಗಳು ನಾಗರಿಕರ ಜೀವನದ ಮೌಲ್ಯಗಳಾಗಿ ಅಂತರ್ಗತವಾದಾಗ ಮಾತ್ರ ಪ್ರತಿಯೊಬ್ಬರಿಗೂ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದರು.
ಪ್ರಾಚಾರ್ಯ ಪಿ. ಮುನಿಯಪ್ಪ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ನೋಡಲ್ ಅಧಿಕಾರಿ ಎಚ್. ಶಿವಾನಂದ, ಉಪನ್ಯಾಸಕರಾದ ಸಂತೋಷ ಅಂಗಡಿ, ಎಂ.ಎಫ್. ಮುರ್ನಾಳ, ಪೂಣಿರ್ಮಾ ಮಾಗನೂರು, ಭರ್ಮಪ್ಪ ಕೊಡದ, ಪ್ರವಿಣಕುಮಾರ ಕೆ, ಜಗದೀಶ ಕುಮಾರ ಮತ್ತಿತರರು ಉಪಸ್ಥಿತರಿದ್ದರು.