ಗ್ರಾಮಗಳ ಅಭಿವೃದ್ಧಿಯಿಂದ ದೇಶ ಪ್ರಗತಿ

02-HHR-P-05
ಗಾಂಧಿ ಜಯಂತಿ ಪ್ರಯುಕ್ತ ಹೊಳೆಹೊನ್ನೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ಗಾಂಧಿ ನಡಿಗೆಯಲ್ಲಿ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು. ಮಂಜುನಾಥ ಭಂಡಾರಿ, ಸಿ.ಹನುಮಂತು, ಪಲ್ಲವಿ ಇತರರಿದ್ದರು.
Published on

ಹೊಳೆಹೊನ್ನೂರು: ಸಂವಿಧಾನ ನೀಡಿರುವ ಹಕ್ಕುಗಳನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು.

ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಗಾಂಧಿ ನಡಿಗೆ ಪಾದಯಾತ್ರೆಯಲ್ಲಿ ಮಾತನಾಡಿ, ಸ್ವತಂತ್ರ ಹೋರಾಟಗಾರರ ಪರಿಶ್ರಮದಿಂದ ದೇಶಕ್ಕೆ ಸ್ವಾತಂತ್ರೃ ಸಿಕ್ಕಿದೆ. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ ಎನ್ನುವುದನ್ನು ಪ್ರತಿಪಾದಿಸಿದ್ದರು ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಹನುಮಂತು, ಪರಿಶಿಷ್ಟ ಜಾತಿ, ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ, ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಶ್ರೀನಿವಾಸ್ ಕರಿಯಣ್ಣ, ಜಿಪಂ ಮಾಜಿ ಸದಸ್ಯೆ ರೇಖಾ ಉಮೇಶ್, ಎಚ್.ಎನ್.ನಾಗರಾಜ್, ಶಾಂತವೀರನಾಯ್ಕ, ಆರ್.ಕೆ.ಶ್ರೀಧರ್, ಆರ್.ಉಮೇಶ್, ಬಿ.ಟಿ.ಹನುಮಂತಪ್ಪ, ಕಗ್ಗಿ ಮಲ್ಲೇಶಪ್ಪ, ಸೀತಾರಾಂ, ಯಲ್ಲೋಜಿರಾವ್, ಡಿ.ವಿ.ಸುರೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net