

ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಿಶ್ರಾ ಅವರ ಮಗಳು ಮತ್ತು ಅಳಯ ಎಂದು ಹೇಳುಕೊಂಡು ಹಲವರಿಗೆ ಉದ್ಯಮಿಗಳಿಗೆ ಕೋಟ್ಯಾಂತರ ರೂ.ವಂಚಿಸಿದ(Fraud) ಆರೋಪದ ಮೇಲೆ ದಂಪತಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಒಡಿಶಾ ಪೊಲೀಸರು ತಿಳಿಸಿದ್ದಾರೆ.
ಹನ್ಸಿತಾ ಅಭಿಲಿಪ್ಸಾ ಮತ್ತು ಅನಿಲ್ ಮೊಹಾಂತಿ ದಂಪತಿಯನ್ನು ಬಂಧನ ಮಾಡಲಾಗಿದೆ.ಈ ಇಬ್ಬರು ಒಡಿಶಾದ ಪ್ರಮುಖ ಅಧಿಕಾರಿಗಳು ಮತ್ತು ರಾಜಕಾರಣಿಗಳೊಂದಿಗೆ ನಿಕಟ ಸಂಬಂಧ ಇದೆ ಎಂದು ಹೇಳಿಕೊಂಡು ಜನರನ್ನು ವಂಚಿಸಿದ್ದಾರೆ. ಗಣಿಮಾಲೀಕರೊಬ್ಬರ ದೂರಿನ ಮೇರೆಗೆ ಅರೆಸ್ಟ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಂಪತಿ ಇಬ್ಬರು ಭುವನೇಶ್ವರದ ಇನ್ಫೋಸಿಟಿ-ನಂದಂಕನನ್ ರಸ್ತೆಯಲ್ಲಿರುವ ಐಷಾರಾಮಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲಿ ಅವರು ತಮ್ಮ ಪ್ರಭಾವಿ ಸಂಪರ್ಕಗಳನ್ನು ಬಳಸಿಕೊಂಡು ಟೆಂಡರ್ ಮತ್ತು ಒಪ್ಪಂದಗಳನ್ನು ಅಂತಿಮಗೊಳಿಸುವ ಸುಳ್ಳು ಭರವಸೆ ನೀಡಿ ವಂಚಿಸುತ್ತಿದ್ದರು ಎಂದು ಅಧಿಕಾರಿಗಳ ತನಿಖೆಯಿಂದ ಬಯಲಾಗಿದೆ.(ಏಜೆನ್ಸೀಸ್)