

ಕೋಲಾರ: ಆರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಮ್ಮಸಂದ್ರ ಗ್ರಾಮದ ಮೋಹನ್ ಬಾಬು (30) ಮತ್ತು ಪದ್ಮಾ (25) ಮೃತರು. ಪತ್ನಿ ಪದ್ಮಾಳನ್ನು ಕತ್ತು ಹಿಸುಕಿ ಕೊಂದು ಬಳಿಕ ಮೋಹನ್ ನೇಣು ಬಿಗಿದುಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇವರಿಬ್ಬರ ಸಾವಿಗೆ ಕಾರಣ ತಿಳಿದುಬಂದಿಲ್ಲ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.