ರೇಣುಕಸ್ವಾಮಿ ಹತ್ಯೆ ಪ್ರಕರಣ; ದರ್ಶನ್​ ಗ್ಯಾಂಗ್​ನ ವಿಚಾರಣೆ ಮುಂದೂಡಿದ ಕೋರ್ಟ್

Darshan
Published on

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎಲ್ಲಾ ರೋಪಿಗಳು ಇಂದು (ಫೆಬ್ರವರಿ 25) ನ್ಯಾಯಾಲಯಕ್ಕೆ ಹಾಜರಾಗಿದ್ದು, ಕೋರ್ಟ್​ ಮುಂದಿನ ವಿಚಾರಣೆಯನ್ನು ಏಪ್ರಿಲ್​ 08ಕ್ಕೆ ಮುಂದೂಡಿದೆ.

ಪ್ರಕರಣದ ಇಬ್ಬರು ಆರೋಪಿಗಳಾ ನಿಖಿಲ್​ ಹಾಗೂ ಕೇಶವಮೂರ್ತಿ ಹೊರತುಪಡಿಸಿ ಉಳಿದವರು57ನೇ ಸಿಸಿಎಚ್​ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು ಏಪ್ರಿಲ್ 08ಕ್ಕೆ ನಡೆಸುವುದಾಗಿ ಹೇಳಿ ಮುಂದೂಡಿದೆ.

ಈ ಮೊದಲು ಜನವರಿ 10ರಂದು ಪ್ರಕರಣದ ಎಲ್ಲಾ ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಮುಂದಿನ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿದ್ದರು. ಜಾಮೀನು ನೀಡುವ ಸಮಯದಲ್ಲೇ, ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂದು ಕೋರ್ಟ್ ಎಲ್ಲಾ ಆರೋಪಿಗಳಿಗೆ ಷರತ್ತು ವಿಧಿಸಿತ್ತು. ಷರತ್ತುಬದ್ಧ ಜಾಮೀನು ಹಿನ್ನೆಲೆಯಲ್ಲಿ ಇಂದು ಎಲ್ಲರೂ ವಿಚಾರಣೆ ಎದುರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net