ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ; ಅರ್ಜಿ ವಿಚಾರಣೆಯನ್ನು ಮುಂದೂಡಿದ ಕೋರ್ಟ್​

Siddaramaiah Gehlot
Published on

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್​ ಮೆಟ್ಟಿಲೇರಿದ್ದು, ಕೋರ್ಟ್​ ವಿಚಾರಣೆಯನ್ನು ಇಂದು (ಆಗಸ್ಟ್​ 31) ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ಬಳಿಕ ಅರ್ಜಿಯ ವಿಚಾರಣೆಯನ್ನು ಮಧ್ಯಾಹ್ನ 2:30ಕ್ಕೆ ಮುಂದೂಡಿ ಆದೇಶಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್​ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ. ರಾಜ್ಯಪಾಲರ ಪರ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ, ಸ್ನೇಹಮಯಿ ಕೃಷ್ಣ ಪರ ಮಾಜಿ ಅಡಿಷನಲ್ ಸಾಲಿಸಿಟರ್ ಜನರಲ್ ಮಣಿದರ್ ಸಿಂಗ್ ವಾದ ಮಂಡಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net