ಬಾಲಕಿ ದತ್ತು ಪ್ರಕರಣ: ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರು

sonu
Published on

ಬೆಂಗಳೂರು: ಕಾನೂನುಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದುಕೊಂಡ ಆರೋಪದ ಮೇಲೆ ಜೈಲು ಸೇರಿದ್ದ 'ಬಿಗ್ ಬಾಸ್' ಖ್ಯಾತಿಯ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರಾಗಿದೆ. ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯ ಈ ಕುರಿತಾಗಿ ಆದೇಶ ಹೊರಡಿಸಿದೆ.

ಇಂದು (ಗುರುವಾರ) ಸಂಜೆ ಅಥವಾ ಶುಕ್ರವಾರ ಬೆಳಗ್ಗೆ ಜೈಲಿನಿಂದ ಸೋನು ಶ್ರೀನಿವಾಸ್ ಗೌಡ ಬಿಡುಗಡೆ ಸಾಧ್ಯತೆ ಇದೆ ಎನ್ನಲಾಗಿದೆ.

ರೀಲ್ಸ್‌ ಸ್ಟಾರ್ ಸೋನುಗೌಡ ಅವರು ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿತ್ತು. ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಸೋನ್ ಗೌಡ ಅವರನ್ನು 5 ದಿನಗಳ ಕಾಲ ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು.‘

ಐದು ದಿನಗಳಲ್ಲಿ ವಿಚಾರಣೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಮತ್ತಷ್ಟು ಕಾಲಾವಕಾಶವನ್ನು ಪೊಲೀಸರು ಕೇಳಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರ ಪರವಾಗಿ ವಾದ ಆಲಿಸಿದ ನ್ಯಾಯಾಧೀಶರು ಸೋನು ಗೌಡ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net