Darshan-Pavitra ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಿದ ಕೋರ್ಟ್; ಬೆಂಗಳೂರಿನಿಂದ ಹೊರತೆರಳಲು ಸಿಕ್ತು ಅನುಮತಿ

Darshan
Published on

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್ (Darshan) ಮತ್ತು ಪವಿತ್ರಾ ಗೌಡ (Pavitra Gowda) ಮೈಸೂರು ಹಾಗೂ ಹೊರರಾಜ್ಯಕ್ಕೆ ತೆರಳಲು ಅನುಮತಿ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಕೋರ್ಟ್​ ಇವರಿಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದೆ.

ನಟ ದರ್ಶನ್​ ಮೈಸೂರಿನಲ್ಲಿ ಉಳಿಯಲು ಅವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಹಾಗೆಯೇ ಪವಿತ್ರಾ ಗೌಡ ಹೊರರಾಜ್ಯಕ್ಕೆ ತೆರಳಬೇಕಾಗಿರುವ ಕಾರಣ ಪ್ರಯಾಣಿಸಲು ಅನುಮತಿ ಕೋರಿ ಬೆಂಗಳೂರಿನ 57ನೇ ಸಿಸಿಎಚ್​ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಅರ್ಜಿಯನ್ನು ಮಾನ್ಯ ಮಾಡಿದ್ದು, ಇವರಿಬ್ಬರಿಗೂ ಮೈಸೂರು ಹಾಗೂ ಹೊರರಾಜ್ಯಕ್ಕೆ ತೆರಳಲು ಅನುಮತಿ ನೀಡಿದ್ದಾರೆ. 

Darshan

ಅದರಂತೆ ನಟ ದರ್ಶನ್​ ಜನವರಿ 12ರಿಂದ 17ರವರೆಗೆ ಮೈಸೂರಿನಲ್ಲಿ ತಂಗಲು ಅವಕಾಶ ನೀಡಲಾಗಿದ್ದು, ಸಂಕ್ರಾಂತಿಯನ್ನು ಅಲ್ಲಿಯೇ ಆಚರಿಸಲಿದ್ಧಾರೆ. ದೇವಸ್ಥಾನ ಮತ್ತು ವ್ಯವಹಾರ ಸಂಬಂಧ ಒಂದು ತಿಂಗಳ ಕಾಲ ಹೊರ ರಾಜ್ಯಕ್ಕೆ ತೆರಳಲು ಪವಿತ್ರಾ ಗೌಡಗೆ ಕೋರ್ಟ್ ಅನುಮತಿ ನೀಡಿದೆ.

ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್‌ ಡಿಸೆಂಬರ್​ 13 ರಂದು ಜಾಮೀನು ಮಂಜೂರು ಮಾಡಿತ್ತು. ಆದೇಶದಲ್ಲಿ ಏಳು ಆರೋಪಿಗಳಿಗೆ, ಕೋರ್ಟ್ ಅನುಮತಿ ಇಲ್ಲದೇ ಬೆಂಗಳೂರು ಬಿಟ್ಟು ಹೋಗುವಂತಿಲ್ಲ. ಪ್ರತಿ ತಿಂಗಳು ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು. ಅದರಂತೆ ಪ್ರಕರಣದ ಆರೋಪಿಗಳು ಇಂದು ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net