ಮುರುಘಾಶ್ರೀಗೆ ಬಿಗ್ ರಿಲೀಫ್: ಜೈಲಿನಿಂದ Chitradurga Murugha Shree ಬಿಡುಗಡೆಗೆ ​​ ​ಆದೇಶ

Murughashree
Published on

ಬೆಂಗಳೂರು: ಪೋಕ್ಸೋ (Pocso) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಶ್ರೀಗಳನ್ನು ( Chitradurga Murugha Shree ) ಜೈಲಿನಿಂದ ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶ ನೀಡಿದೆ.

ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾಶ್ರೀಗಳನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿದೆ.

ಈ ಹಿಂದೆ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಸಾಕ್ಷ್ಯ ವಿಚಾರಣೆ ನಡೆಸುವವರೆಗೂ ಮುರುಘಾಶ್ರೀಯನ್ನು ಬಂಧನದಲ್ಲಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಮುರುಘಾಶ್ರೀ ಮತ್ತೆ ಜೈಲು ಸೇರಿದ್ದರು. ಸಾಕ್ಷ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸುಪ್ರೀಂಕೋರ್ಟ್​ ಆದೇಶಿಸಿತ್ತು. ಇದೀಗ, ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.

ಆದೇಶದ ಪ್ರತಿ ಜಿಲ್ಲಾ ಕಾರಾಗೃಹ ಅಧಿಕಾರಿಗಳ ಕೈ ಸೇರಿದ ಬಳಿಕ ತಲುಪಿದ ಬಳಿಕ ಬಿಡುಗಡೆ ಮುರುಘಾಶ್ರೀ ಜೈಲಿನಿಂದ ಹೊರಗೆ ಬರಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net