ಹಿಂದೂ ದೇವತೆ ಬಗ್ಗೆ ಆಕ್ಷೇಪಾರ್ಹ ಟ್ವೀಟ್​​: ಜುಬೇರ್​ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್​

Mohammadzubir
Published on

ನವದೆಹಲಿ: ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಜಾಮೀನು ಅರ್ಜಿ ತಿರಸ್ಕರಿಸಿರುವ ದೆಹಲಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

2018ರಲ್ಲಿ ಹಿಂದೂ ದೇವತೆಯ ವಿರುದ್ಧದ 'ಆಕ್ಷೇಪಾರ್ಹ ಟ್ವೀಟ್'ಗೆ ಸಂಬಂಧಿಸಿದ ಪ್ರಕರಣದಲ್ಲಿ ಜುಬೇರ್​ನನ್ನು ಬಂಧಿಸಲಾಗಿತ್ತು. ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸರ್ವರಿಯಾ ಪೊಲೀಸ್ ಮನವಿಯನ್ನು ಅನುಮತಿಸಿ, ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

5 ದಿನಗಳ ಕಾಲ ಬಂಧನದ ಅವಧಿ ಮುಗಿದ ಹಿನ್ನಲೆಯಲ್ಲಿ ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಸದ್ಯ ಟ್ವೀಟ್​ ಮಾಡಿದ್ದು ನಾನೇ ಎಂದು ಒಪ್ಪಿಕೊಂಡಿರುವ ಜುಬೈರ್​ ವಿರುದ್ಧ ಐಪಿಸಿಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಮತ್ತು 295 (ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳವನ್ನು ಅಪವಿತ್ರಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net