ಸಿಇಟಿ ಪರೀಕ್ಷೆ, ಮಧ್ಯಪ್ರವೇಶಕ್ಕೆ ಕೋರ್ಟ್ ನಕಾರ

highcourt
Published on

ಬೆಂಗಳೂರು: ಕಳೆದ ಏಪ್ರಿಲ್‌ನಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಕೇಳಲಾದ 50ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಪರಿಶೀಲಿಸಲು ತಜ್ಞರ ಸಮಿತಿ ರಚಿಸುವ ರಾಜ್ಯ ಸರ್ಕಾರದ ನಿರ್ಧಾರದ ಸಿಂಧುತ್ವ ವಿಚಾರದಲ್ಲಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣ ಸಂಬಂಧ ಬೆಂಗಳೂರಿನ ದಾಸರಹಳ್ಳಿ ನಿವಾಸಿ ತನ್ಮಯ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ಅರ್ಜಿ ಇತ್ಯರ್ಥಪಡಿಸಿದೆ. ವಾದ ಮಂಡಿಸಿದ ಅರ್ಜಿದಾರರು, ತಾನು ದ್ವಿತೀಯ ಪಿಯುಸಿ ಸಿಬಿಎಸ್‌ಇ ಪಠ್ಯಕ್ರಮದಲ್ಲಿ ವ್ಯಾಸಂಗ ಮಾಡಿದ್ದೇನೆ.

ಈ ಬಾರಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಗೊಂದಲ ಉಂಟಾಗಿದೆ. ಪಠ್ಯೇತರ ಪ್ರಶ್ನೆಗಳನ್ನು ರ‌್ಯಾಂಕ್ ಪ್ರಕಟಣೆ ವೇಳೆ ಪರಿಗಣಿಸುವುದಿಲ್ಲ ಎಂದು ಈ ಮೊದಲೇ ತಿಳಿದಿದ್ದರೆ ಆ ಪ್ರಶ್ನೆಗಳಿಗೆ ನೀಡುವ ಸಮಯವನ್ನು ಇತರ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದೆ ಎಂದು ಪೀಠದ ಗಮನಕ್ಕೆ ತಂದರು.

ದಾಖಲೆಗಳನ್ನು ಪರಿಶೀಲಿಸಿದ ಹಾಗೂ ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ಸರ್ಕಾರದ ಈ ನಿರ್ಧಾರವೂ ತಜ್ಞರ ಅಭಿಪ್ರಾಯದಿಂದ ರೂಪುಗೊಂಡಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಇದರ ಸಿಂಧುತ್ವವನ್ನು ಪ್ರಶ್ನಿಸುವಲ್ಲಿ ಮಧ್ಯ ಪ್ರವೇಶ ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ. ಅಲ್ಲದೆ, ಭವಿಷ್ಯದಲ್ಲಿ ಇಂತಹ ತಪ್ಪುಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net