

ಬೆಂಗಳೂರು : ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ಅಥವಾ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಹೊಸದಾಗಿ ತನಿಖೆ ನಡೆಸಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಆರೋಪಿ ಖುಲಾಸೆಗೊಂಡಿರುವ ಹಿನ್ನೆಲೆಯಲ್ಲಿ ಮರು ತನಿಖೆಗೆ ಸಾರ್ವಜನಿಕರು ಪ್ರತಿಭಟನೆ ನಡೆಸಿ ಒತ್ತಾಯ ಮಾಡಿದ್ದರು. ಹೀಗಾಗಿ ಬೆಂಗಳೂರಿನ ಶೇಷಾದ್ರಿಪುರದ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ.ನವೀನ್ ಕುಮಾರ್ ಮತ್ತು ಬಲ್ವಾಡು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ಅರ್ಜಿಯಲ್ಲಿ ಅರ್ಜಿದಾರರು ಎತ್ತಿರುವ ಮನವಿ ಕುರಿತು ಕಾನೂನಿನಡಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆಯಬಹುದು ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು.