5483ಕ್ಕೆ ಏರಿಕೆಯಾದ ಕೊವಿಡ್​-19 ಸಾವಿನ ಸಂಖ್ಯೆ; ಚೇತರಿಕೆ ಪ್ರಮಾಣವೂ ಹೆಚ್ಚಳ

Covid 19 2
Published on

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 8324 ಹೊಸ ಕರೊನಾ ಪ್ರಕರಣಗಳೂ ಪತ್ತೆಯಾಗಿದ್ದು, 8,110 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. 115 ಸೋಂಕಿತರು ಜೀವ ಕಳೆದುಕೊಂಡಿದ್ದಾರೆ.

ಒಂದು ದಿನದಲ್ಲಿ ಸೋಂಕಿನಿಂದ ಚೇತರಿಸಿಕೊಂಡು, ಡಿಸ್​ಚಾರ್ಜ್ ಆಗುತ್ತಿರುವವರ ಪ್ರಮಾಣವೂ ಹೆಚ್ಚುತ್ತಿರುವುದು ಸ್ವಲ್ಪ ಮಟ್ಟಿಗೆ ನಿರಾಳತೆ ತಂದಿದೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 3,27,076ಕ್ಕೆ ಏರಿಕೆಯಾಗಿದೆ. ಅದರಲ್ಲಿ 2,35,128 ಮಂದಿ ಚೇತರಿಸಿಕೊಂಡು, ಡಿಸ್​ಚಾರ್ಜ್​ ಆಗಿದ್ದಾರೆ. ಸಾವಿನ ಸಂಖ್ಯೆ 5483ಕ್ಕೆ ತಲುಪಿದ್ದು, ಸಕ್ರಿಯ ಪ್ರಕರಣಗಳು 86,446 ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net