

ಬೆಂಗಳೂರು: ವಿಲ್ಸನ್ ಗಾರ್ಡನ್ ಠಾಣೆಯ ಇನ್ಸ್ಪೆಕ್ಟರ್ ಮೀರ್ಗೌಸ್ ಅವರು ಕೊವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು.
ಆದರೆ ಅವರಿಗೆ ಕೊವಿಡ್-19 ಸೋಂಕು ಇರಲಿಲ್ಲ. ಬದಲಿಗೆ ಜ್ವರದಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳು ಸ್ಪಷ್ಟಪಡಿಸಿವೆ.
ತೀವ್ರ ಜ್ವರ ಇದ್ದ ಕಾರಣ ಮೀರ್ಗೌಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅವರ ನಿವೃತ್ತಿಗೆ ಇನ್ನು ಎರಡು ತಿಂಗಳಷ್ಟೇ ಬಾಕಿ ಇತ್ತು ಎಂದು ಹೇಳಲಾಗಿದೆ.